ಆಲೂರು: ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ತಂದೆ ತಾಯಿಯರ ಪಾದಪೂಜೆ ಮಾಡಿ ೧೦ನೇ ತರಗತಿ ವಿದ್ಯಾರ್ಥಿಗಳು ಆಶೀರ್ವಾದ ಪಡೆದು ಕೊಂಡರು. ತಾಲೂಕಿನ ಕೆ.ಹೊ ಕೋಟೆಯ ಶ್ರೀಮತಿ ಶಾರದ ಕೆ.ಎನ್. ರಾಜಶೇಖರ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಹಾ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಸಿಆರ್‌ಪಿ ಮೈಮುನಾ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಶಾಮರಾವ್ ವಹಿಸಿದ್ದರು. ಪೂಜಾ ಕಾರ್ಯಕ್ರಮವನ್ನು ಅರ್ಚಕರಾದ ರಾಜಶೇಖರ ಶರ್ಮ ನಡೆಸಿ ಕೊಟ್ಟರು. ವಿದ್ಯಾರ್ಥಿಗಳಿಗೆ ವಿಜ್ಞಾನ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪೋಷಕರಾದ ಸವಿತಾ ಜಗದೀಶ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನುಗಳನ್ನು ನೀಡಿ ಶುಭ ಹಾರೈಸಿದರು.
ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಶಿಕ್ಷಕ ಎಂ.ಪಿ ಶಿವಕುಮಾರ, ಶಿಕ್ಷಕರಾದ ಸೋಮೇಶ, ಪತ್ರಕರ್ತ ಮೋಹನ ಕಾಡ್ಲೂರು, ಪ್ರೌಢಶಾಲೆಯ ಎಲ್ಲಾ ಶಿಕ್ಷಕರುಗಳು ಇದ್ದರು.