ಬೇಲೂರು: ನಿರ್ಭೀತಿಯಿಂದ ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಬೇಕೆಂದು ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ತಹಶೀಲ್ದಾರ ಎಂ. ಮಮತಾ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡುವ ಮೂಲಕ ಬರಮಾಡಿಕೊಂಡು ಶುಭ ಹಾರೈಸಿ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟ. ಆದ್ದರಿಂದ ವಿದ್ಯಾರ್ಥಿಗಳಿಗೆ ಪೋಷಕರು ಯಾವುದೇ ಒತ್ತಡ ಹೇರದೆ ಅವರಿಗೆ ನಿರ್ಭೀತಿಯಿಂದ ಪರೀಕ್ಷೆ ಬರೆಯಲು ಸಹಕಾರ ನೀಡಬೇಕು. ಒಂದು ವರ್ಷಗಳ ಕಾಲ ಪ್ರೋತ್ಸಾಹ ನೀಡಿದ ವಿದ್ಯೆ ಕಲಿಸಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಕಾಲಘಟ್ಟ ಇದು ಯಾವುದೇ ಅಳುಕಿಲ್ಲದೆ ಧೈರ್ಯದಿಂದ ಪರೀಕ್ಷೆಯನ್ನು ಬರೆಯಬೇಕು. ಅಂಬೇಡ್ಕರ್‌ರವರ ಆಶಯದಂತೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ವಿದ್ಯೆ ಕಲಿಯುವ ಮೂಲಕ ದೇಶದ ಬಹುದೊಡ್ಡ ಪ್ರಜೆಯಾಗಬೇಕು ಎಂಬುವುದು ಅವರ ಕನಸನ್ನು ನನಸು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ, ಎಸ್‌ಇಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಹರೀಶ, ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪ್ರಶಾಂತ, ಶಿಕ್ಷಣ ಸಂಯೋಜಕ ರವಿಕುಮಾರ, ಗೋಪಾಲ, ಸಹಾಯಕ ನಿರ್ದೇಶಕ ಜಗದೀಶ ನಾಯಕ್ ಇತರರು ಹಾಜರಿದ್ದರು.