ಚನ್ನರಾಯಪಟ್ಟಣ: ನಗರದಲ್ಲಿ ೧೨ ಕಡೆ ಅಳವಡಿಸಿರುವ ೩೨ ಸಿಸಿ ಕ್ಯಾಮೆರಾಗಳನ್ನು ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಸಿ. ಎನ್. ಬಾಲಕೃಷ್ಣ ಲೋಕರ್ಪಣೆ ಮಾಡಿ ಮಾತನಾಡಿದರು.
ಇಂದು ಸಿಸಿ ಕ್ಯಾಮೆರಾಗಳ ಲೋಕರ್ಪಣೆ ಮಾಡಿ ಮಾತನಾಡಿದ ಶಾಸಕ ಸಿ.ಎನ್. ಬಾಲಕೃಷ್ಣ, ಚನ್ನರಾಯಪಟ್ಟಣ ನಗರದಲ್ಲಿ ನಡೆಯುತ್ತಿರುವ ಹಲವಾರು ಕಳ್ಳತನ ಪ್ರಕರಣಗಳನ್ನು ತಡೆಗಟ್ಟುವ ದೃಷ್ಟಿಯಿಂದ ಹಾಗೂ ಸಂಚಾರಿ ನಿಯಮಗಳನ್ನು ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದರು.
ಪ್ರತಿಯೊಬ್ಬ ಚಾಲಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು, ಎಲ್ಲಾ ನಾಗರಿಕರು ಸಹಕಾರ ನೀಡಬೇಕು, ಸಾರ್ವಜನಿಕರು ಪೊಲೀಸರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಡಿವೈಎಸ್ಪಿ ರವಿಶಂಕರ್, ಪೊಲೀಸ್ ವೃತ್ತ ನಿರೀಕ್ಷಕ ಸಿ.ಜಿ ರವಿ, ಪುರಸಭಾಧ್ಯಕ್ಷೆ ರೇಖಾ ಅನಿಲ್, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಬನಶಂಕರಿ ರಘು, ಪುರಸಭೆ ಮುಖ್ಯ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.