ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ ೭೫ರ ಬಾಗೆ ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಸಿಲುಕಿ ಜಿಂಕೆಯೊಂದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮುಂಜಾನೆ ನಡೆದಿದೆ.
ಈ ಪ್ರದೇಶದಲ್ಲಿ ಪದೇ ಪದೇ ಜಿಂಕೆಗಳು ರಾಷ್ಟ್ರೀಯ ಹೆದ್ದಾರಿ ಚಲಿಸುವ ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವ ಘಟನೆಗಳು ಮರುಕಳಿಸುತ್ತಲೇ ಇದ್ದರೂ ಅರಣ್ಯ ಇಲಾಖೆ ಮಾತ್ರ ಯಾವುದೇ ಮುಂಜಾಗ್ರತ ಕ್ರಮವನ್ನು ಕೈಗೊಂಡಿಲ್ಲ.
ಕಾಡು ಪ್ರಾಣಿಗಳು ಓಡಾಡುವ ಪ್ರದೇಶವಾಗಿದ್ದು, ವಾಹನ ಸವಾರರಿಗೆ ಯಾವುದೇ ಸೂಚನೆ ಫಲಕ ಇಲ್ಲದಿರುವುದು, ಕಾಡು ಪ್ರಾಣಿಗಳು ಹೆದ್ದಾರಿ ವಾಹನಕ್ಕೆ ಸಿಲುಕಿ ಸಾವನ್ನಪ್ಪುತ್ತಿರುವ ಘಟನೆ ಹೆಚ್ಚಾಗತೊಡಗಿದೆ ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.