ಆಲೂರು: ತಾಲೂಕಿನ ಚಿಕ್ಕಕಣಗಾಲು ಹೊಸಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆಗೆ ಬೆಂಕಿ ತಗಲಿದ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ತಾಲೂಕಿನ ಪಾಳ್ಯ ಹೋಬಳಿ ತಾಳೂರು ಗ್ರಾಮ ಪಂಚಾಯಿತಿಗೆ ಸೇರಿದ ಚಿಕ್ಕಕಣಗಾಲು ಹೊಸಳ್ಳಿ ಗ್ರಾಮದ ಬಸವರಾಜ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿದ್ದ ಸಾವಿರಾರು ರೂ. ಹಣ, ಪಾತ್ರೆ ಪಗಡೆ, ದವಸ ಧಾನ್ಯ ಮತ್ತಿತರ ಹಲವಾರು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಘಟನೆಯಿಂದ ಮನೆ ಮಾಲೀಕ ಸಂಕಷ್ಟಕ್ಕೆ ಒಳಗಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಕೂಡಲೇ ಸೂಕ್ತ ಪರಿಹಾರ ಕೊಡಿಸಬೇಕು ಎಂದು ತಾಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.