ಸಕಲೇಶಪುರ: ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ ಕೂಲಿ ಕಾರ್ಮಿಕ ಸಾವನಪ್ಪಿರುವ ಪ್ರಕರಣ ತಾಲೂಕಿನ ಮಠಸಾಗರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯೋಗೀಶ್(೬೦) ಮೃತ ದುರ್ದೈವಿಯಾಗಿದ್ದು ಕೂಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ತೀವ್ರ ಗಾಯಗೊಂಡಿದ್ದನ್ನು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗಾಯಾಳು ಮೃತಪಟ್ಟಿದ್ದಾನೆ.
ಆಸ್ಪತ್ರೆಗೆ ಅರಣ್ಯಾಧಿಕಾರಿಗಳ ತಂಡ ಪರಿಶೀಲನೆಗೆ ಆಗಮಿಸದ ವೇಳೆ ಮೃತದ ಸಂಬಂಧಿಕರು ಸೇರಿದಂತೆ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.