ಚನ್ನರಾಯಪಟ್ಟಣ: ಗುಲಸಿಂದ ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಶಾಸಕ ಸಿ.ಎನ್ ಬಾಲಕೃಷ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕ ಬಾಲಕೃಷ್ಣ ದೇಶ ಸುತ್ತಬೇಕು, ಇಲ್ಲವೇ ಕೋಶ ಓದಬೇಕು ಎಂಬ ಗಾದೆಯುಂತೆ ಎಲ್ಲರೂ ಸಹ ಗ್ರಂಥಾಲಯ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆಯನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ಅತ್ಯುತ್ತಮ ಮಾದರಿಯ ಡಿಜಿಟಲ್ ಗ್ರಂಥಾಲಯವನ್ನು ನಿರ್ಮಾಣ ಮಾಡಿರುವ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಜಗದೀಶ ಮತ್ತು ಪಿಡಿಒ ಜ್ಯೋತಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಹಕಾರ ಮಾರಾಟ ಮಂಡಳಿ ನಿರ್ದೇಶಕ ಸಿ.ಎನ್ ಪುಟ್ಟಸ್ವಾಮಿಗೌಡ, ಟಿಎಪಿಎಂಎಸ್ ನಿರ್ದೇಶಕ ಮರಗೂರು ಅನಿಲ, ಗ್ರಾಮ ಪಂಚಾಯತಿ ಅಧ್ಯಕ್ಷ ಬೆಲಸಿಂದ ಜಗದೀಶ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪುಷ್ಪಲತಾ, ಗ್ರಾಮ ಪಂಚಾಯಿತಿ ಪಿಡಿಓ ಜ್ಯೋತಿ, ಗ್ರಾಮ ಪಂಚಾಯತಿ ಸದಸ್ಯರಾದ ಮಂಜುನಾಥ, ಮುಖ್ಯ ಶಿಕ್ಷಕ ಮಲ್ಲೇಗೌಡ, ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಗುಲಸಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಹಾಜರಿದ್ದರು.