ಹಾಸನ: ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಬಿ.ಸಿ ರಾಯ್ ಸಭಾಂಗಣದಲ್ಲಿ ಇಂದು ನಡೆದ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಲು ಅಧಿಕಾರಿಗಳಿಗೆ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಕಾಂತ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಶಿವಸ್ವಾಮಿ, ಆರ್.ಸಿ.ಹೆಚ್ ಅಧಿಕಾರಿ ಡಾ|ಚೇತನ್ ಉಪಸ್ಥಿತರಿದ್ದರು.