ಸಕಲೇಶಪುರ: ಕಳೆದ ಮೂರು ನಾಲ್ಕು ದಿನಗಳಿಂದ ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡನಗರ ಗ್ರಾಮದ ಗ್ರಾಮಸ್ಥರು ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಸ್ಥಳಕ್ಕೆ ಶಾಸಕ ಎಚ್. ಕೆ. ಕುಮಾರಸ್ವಾಮಿ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಯಾರೇ ಆಗಲಿ ಏಕಾಏಕಿ ಸರ್ಕಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ. ಸರ್ಕಾರಿ ಗೋಮಾಳದಲ್ಲಿ ನಿವೇಶನರಹಿತರಿಗೆ ನಿವೇಶನ ಒದಗಿಸಿ ಮನೆ ಕೊಟ್ಟಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಈ ವೇಳೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಸೇರಿದಂತೆ ನಿವೇಶನ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಮುಖಂಡರು ಹಾಜರಿದ್ದರು.