ನುಗ್ಗೇಹಳ್ಳಿ: ಹೋಬಳಿಯ ಅವೇರಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ೨೫ ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ತಿಳಿಸಿದರು. ಹೋಬಳಿಯ ಅವೇರಹಳ್ಳಿ ಗ್ರಾಮದ ಪರಿಮಿತಿಯಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಈಗಾಗಲೇ ಗ್ರಾಮದ ಪರಿಮಿತಿಯಲ್ಲಿ ಅನೇಕ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಜೊತೆಗೆ ಒಳಚರಂಡಿ, ಕುಡಿಯುವ ನೀರು, ವಿದ್ಯುತ್ ದೀಪಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ ಹಾಗೂ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಜಂಬೂರು ಗ್ರಾಮ ಪಂಚಾಯತಿ ವತಿಯಿಂದ ಉದ್ಯೋಗ ಖಾತರಿ ನರೇಗಾ ಯೋಜನೆ ಮೂಲಕ ಅನೇಕ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಲಾಗಿದೆ. ತಾಲೂಕಿನ ಕಟ್ಟ ಕಡೆಯ ಗ್ರಾಮದ ಅಭಿವೃದ್ಧಿಗೂ ತಮ್ಮ ಅಧಿಕಾರ ಅವಧಿಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಲಾಗಿದೆ. ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಈ ಭಾಗದ ಅನೇಕ ಕೆರೆಗಳನ್ನು ತುಂಬಿಸಲಾಗಿದ್ದು ಇದರಿಂದ ಅಂತರ್ಜಲ ಮಟ್ಟ ಏರಿಕೆಗೊಂಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ವಿಠ್ಠಲ್ ಕುಮಾರ್, ಸದಸ್ಯರಾದ ಹರೀಶ್, ಲೀಲಾವತಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅನಿಲ್ ಗೌಡ, ಕೃಷಿಪತ್ತಿನ ನಿರ್ದೇಶಕ ಎಚ್‌ಪಿ ಸಂಪತ್ ಕುಮಾರ್, ಮುಖಂಡರಾದ ತೋಟಿ ನಾಗರಾಜು, ಅವೇರಹಳ್ಳಿ ನಾಗಣ್ಣ, ಒಳಗೇರಹಳ್ಳಿ ಮಂಜಣ್ಣ, ಡೈರಿ ಶ್ರೀನಿವಾಸ, ಶಂಕರ, ಶೇಖರ, ಆನಂದ ಸೇರಿದಂತೆ ಅನೇಕರು ಹಾಜರಿದ್ದರು.