ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ 91ನೇ ಜನ್ಮದಿನದ ಪ್ರಯುಕ್ತ ಇಂದು ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶ್ರೀಮತಿ ಭವಾನಿ ರೇವಣ್ಣರವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ತ್ರಿಲೋಚನ, ಪುರಸಭೆ ಸದಸ್ಯ ಶ್ರೀಧರ, ಗಂಗೂರು ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ, ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.