ಹಾಸನ: 7ನೇ ವೇತನ ಆಯೋಗ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಕರೆ ನೀಡಿದ್ದ ಸರಕಾರಿ ನೌಕರರ ಮುಷ್ಕರಕ್ಕೆ ಸ್ಪಂದಿಸಿದ ಸರಕಾರವು ಜಿಲ್ಲಾ ಸರಕಾರಿ ನೌಕರರ ಸಂಘದ ಜೊತೆ ಸರಕಾರವು ಚರ್ಚೆ ಮಾಡಿ ಶೇ. 17ರಷ್ಟು ಮಧ್ಯಂತರ ಪರಿಹಾರದ ಆದೇಶವನ್ನು ಮಾಡಲು ಹಾಗೂ ಎನ್‌ಪಿಎಸ್ ನೌಕರರ ಸಮಸ್ಯೆ ಬಗ್ಗೆ ಈಗಾಗಲೇ ಐದು ರಾಜ್ಯಗಳು ಮಾಡಿರುವ ಆದೇಶದಂತೆ ಸಮಿತಿ ರಚನೆ ಮಾಡಲಾಗುವುದು ಎಂದು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನ್ಯಾಯ ಒದಗಿಸಲು ಕಾರಣಕರ್ತರಾದ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರಿಗೆ ಹಾಗೂ ಆದೇಶ ಮಾಡಿದ ಸರಕಾರದ ಮುಖ್ಯಮಂತ್ರಿಗಳಿಗೆ ಎಲ್ಲಾ ಸರಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ತಿಳಿಸುವುದಾಗಿ ಮಾಜಿ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ಶ್ರೀನಿವಾಸ ತಿಳಿಸಿದ್ದಾರೆ.