ಹಾಸನ: ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ, ಗುಡ್ಡೆನಹಳ್ಳಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಸಾರಿಗೆ ವಿಭಾಗೀಯ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ನಗರದ ಗುಡ್ಡೆನಹಳ್ಳಿಯಲ್ಲಿ ಎಂಟಕ್ಕಿಂತ ಹೆಚ್ಚು ವಿದ್ಯಾರ್ಥಿ ನಿಲಯಗಳಿದ್ದು, 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದರೆ ಪ್ರತಿದಿನ ಕೇವಲ 2ರಿಂದ 3 ನಗರ ಸಾರಿಗೆ ಬಸ್‌ಗಳು ಮಾತ್ರ ಸಂಚರಿಸುತ್ತವೆ. ಇದು ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಹಾಗೂ ಪರೀಕ್ಷಾ ಸಂದರ್ಭದಲ್ಲಿ ಕಾಲೇಜಿಗೆ ಹೋಗಲು ಬಹಳ ಅಡ್ಡಿ ಉಂಟಾಗುತ್ತಿದೆ ಎಂದು ದೂರಿದರು.
ಮನವಿ ಪತ್ರವನ್ನು ಅಧಿಕಾರಿ ಸತೀಶ ಅವರಿಗೆ ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಜಿಲ್ಲಾ ಸಹಸಂಚಾಲಕಿ ಚೈತ್ರ, ವಿದ್ಯಾರ್ಥಿಗಳಾದ ಸಂಪತ್, ಹೊನ್ನಪ್ಪ, ಸಂದೇಶ, ಹರ್ಷ, ರಂಗಸ್ವಾಮಿ, ಜಯಂತ ಹಾಗೂ ಇನ್ನಿತರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.