ಸಕಲೇಶಪುರ: ಪುರಸಭಾ ಉಪಾಧ್ಯಕ್ಷರಾಗಿ 19ನೇ ವಾರ್ಡ್‌ನ ಜೆಡಿಎಸ್ ಬೆಂಬಲಿತ ಸದಸ್ಯೆ ಸರಿತಾ ಗಿರೀಶ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 23 ಸದಸ್ಯ ಬಲದ ಸಕಲೇಶಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದು ಅಧ್ಯಕ್ಷರಾಗಿ ಕಾಡಪ್ಪ ಅಧಿಕಾರದಲ್ಲಿದ್ದಾರೆ. ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದಿನ ಪುರಸಭಾ ಉಪಾಧ್ಯಕ್ಷೆ ವಿದ್ಯಾ.ಪಿ.ಶೆಟ್ಟಿ ರಾಜೀನಾಮೆ ನೀಡಿದ್ದರಿಂದ ಶಾಸಕ ಎಚ್.ಕೆ ಕುಮಾರಸ್ವಾಮಿ ನಿರ್ದೇಶನದಂತೆ ಸರಿತಾ ಗಿರೀಶ್ ಉಪಾದ್ಯಕ್ಷರಾಗಿ ಮುಂದಿನ ಮೂರು ತಿಂಗಳ ಅವಧಿಗೆ ಕಾರ್ಯ ನಿರ್ವಹಿಸಲಿದ್ದಾರೆ.