News Karnataka
ಸಿಟಿಜನ್ ಕಾರ್ನರ್

ಸಭೆ ಸಮಾರಂಭ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ

Voting will be held on the 10th and District Collector MS Archana has ordered to ban meetings and ceremonies in the district.
Photo Credit : Bharath

ಹಾಸನ: ವಿಧಾನಸಭೆ ಚುನಾವಣೆ ಮತದಾನ ಮೇ 10 ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತಗಳನ್ನು ಯಾಚಿಸುವ ಸಂದರ್ಭಗಳಲ್ಲಿ ಪರಸ್ಪರ ಘರ್ಷಣೆಗಳು ಉಂಟಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥಗೆ ದಕ್ಕೆ ಉಂಟಾಗುವ ಸಂಭವಗಳು ಹೆಚ್ಚಾಗಿವೆ. ಆದ್ದರಿಂದ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ದೃಷ್ಠಿಯಿಂದ ಮತದಾನ ಮುಕ್ತಾಯದ ಮುಂಚಿನ 48 ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಸಭೆ, ಸಮಾರಂಭಗಳನ್ನು ಮಾಡಲು ಅವಕಾಶವಿಲ್ಲ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಬಹಿರಂಗ ಸಭೆ, ಸಮಾರಂಭಗಳನ್ನು ನಿರ್ಬಂಧಿಸಿ ಜಿಲ್ಲೆಯಾದ್ಯಂತ ನಿಷೇದಾಜ್ಞೆಯನ್ನು ಹೊರಡಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಆದೇಶಿಸಿದ್ದಾರೆ.

ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾದ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೇ 8ರ 6 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾಧ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಿಷೇಧಿತ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರಾ ಮೆರವಣಿಗೆ ನಡೆಸುವುದು, 5 ಜನರಿಗಿಂತ ಹೆಚ್ಚು ಜನ ಒಟ್ಟಿಗೆ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ.

ಮತದಾನ ಮುಕ್ತಾಯದ ಮುಂಚಿನ 48 ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ, ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ಪ್ರಚಾರಕ್ಕಾಗಿ ಮನೆ, ಮನೆಗೆ ಮತಗಳನ್ನು ಯಾಚಿಸಲು ಕೇವಲ 5 ಜನರು ಮಾತ್ರ ಹೋಗತಕ್ಕದ್ದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ, ಯಾವುದೇ ಪ್ರಚಾರಗಳನ್ನು ಬಿತ್ತಿ ಪತ್ರಗಳನ್ನು ಹಂಚುವ ಮೂಲಕ ವಾಹನದಲ್ಲಿ ಪ್ರಚಾರ ಮಾಡುವ ಘೋಷಣೆ ಕೂಗುವ, ಭಾಷಣ ಮಾಡುವ ಚಟುವಟಿಕೆಗಳನ್ನು ನಿಷೇಧಿಸಿದ್ದಾರೆ. ನಿಷೇಧಿತ ಅವಧಿಯಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ಹೊರಗೆ ಹೋಗತಕ್ಕದ್ದು, ಈ ನಿಬಂಧನೆ ಬೇರೆ ಕ್ಷೇತ್ರದ ಮತದಾರರಿಗೆ ಅನ್ವಯಿಸುವುದಿಲ್ಲ.

ಮದುವೆ, ಮುಂಜಿ, ಶವ ಸಂಸ್ಕಾರ, ಕಾಯ್ರಕ್ರಮಗಳಿಗೆ ಅನ್ವಯವಾಗುವುದಿಲ್ಲ. ಆದರೆ ಕಾರ್ಯಕ್ರಮಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ನಿಷೇದಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಆದೇಶಿಸಿದ್ದಾರೆ. ಈ ನಿಷೇದಾಜ್ಞೆ ಸರ್ಕಾರವು ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ-ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಟಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *