ಹಾಸನ: ಹಾಸನ ತಾಲೂಕಿನ ಸಕಲೇಶಪುರ ವಿಧಾನ ಸಭೆ ಕ್ಷೇತ್ರಕ್ಕೆ ಒಳಪಡುವ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಪಶುಚಿಕಿತ್ಸಾ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ ವಿರೋಧಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸುವುದಾಗಿ ತಿಳಿಸಿದ್ದರು.
ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ.ಎಸ್.ಅರ್ಚನಾ ನಿರ್ದೇಶನದಂತೆ ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಪಶುಪಾಲನ ಇಲಾಖೆ ವೈದ್ಯರೊಂದಿಗೆ ದೊಡ್ಡಬೀಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಪಶುಚಿಕಿತ್ಸಾ ಕೇಂದ್ರದ ಸಿಬ್ಬಂದಿಗಳ ಕೊರತೆ ಬಗ್ಗೆ ಚರ್ಚಿಸಿದರು.
ನಂತರ ಪಶುಪಾಲನ ಇಲಾಖೆಯ ಉಪ ನಿರ್ದೇಶಕರು ದೊಡ್ಡ ಬೀಕನಹಳ್ಳಿ ಪಶು ಚಿಕಿತ್ಸಾ ಆಸ್ಪತ್ರೆಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದಾರೆ. ನಂತರ ಗ್ರಾಮಸ್ಥರು ಮತದಾನ ಬಹಿಷ್ಕಾರ ಹಿಂಪಡೆಯುವುದಾಗಿ ತಿಳಿಸಿದ್ದಾರೆ ಎಂದು ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.