News Karnataka
ಸಿಟಿಜನ್ ಕಾರ್ನರ್

ದಿನಸಿ ಅಂಗಡಿಗಳಲ್ಲಿ ಮದ್ಯ ಮಾರಾಟ: ಕ್ರಮಕ್ಕೆ ಒತ್ತಾಯ

The villagers staged a protest in front of the sub-divisional office demanding a curb on the sale of illegal liquor in kaudalli village.
Photo Credit : Bharath

ಸಕಲೇಶಪುರ: ಗ್ರಾಮದಲ್ಲಿರುವ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೌಡಳ್ಳಿ ಗ್ರಾಮಸ್ಥರು ಉಪವಿಭಾಗ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆಕಾರರು ಅಕ್ರಮ ಮದ್ಯ ಮಾರಾಟ ನಿಯಂತ್ರಿಸಬೇಕಾಗಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕರ್ತವ್ಯ ಆದರೆ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕುಡಿತದ ಚಟಕ್ಕೆ ಯುವ ಜನಾಂಗ ಹಾಗೂ ಕೂಲಿ ಕಾರ್ಮಿಕ ಕುಟುಂಬ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಮಾಮೂಲಿ ವಸೂಲಿಯಲ್ಲಿಯೇ ನಿರತವಾಗಿ ಹಳ್ಳಿಗಳ ನೆಮ್ಮದಿ ಹಾಳು ಮಾಡುತ್ತಿದ್ದಾರೆಂದು ಅಕ್ರೋಶ ವ್ಯಕ್ತಪಡಿಸಿದರು.

ನಿರಂತರವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಅಬಕಾರಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಎಲ್ಲೊ ಕೆಲವು ಕಡೆ ದಾಳಿ ಮಾಡಿದಂತೆ ಪ್ರಚಾರ ಗಿಟ್ಟಿಸಿಕೊಂಡು ಇತರರಿಗೆ ಎಚ್ಚರಿಕೆ ಕೊಡುವ ಹಾಗೆ ನಟಿಸಿಕೊಂಡು, ಆ ಮೂಲಕ ವಸೂಲಿಯಲ್ಲಿ ನಿರತರಾಗಿದ್ದಾರೆ ಎಂದು ಅರೋಪಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ತಿಮ್ಮಯ್ಯ, ಗ್ರಾಮಸ್ಥರಾದ ಜಯ, ಜಯಮ್ಮ, ಮಂಜುಳ, ಕಮಲಾಕ್ಷಿ, ಕುಮಾರಸ್ವಾಮಿ, ಮಂಜುನಾಥ ಇನ್ನಿತರರು ಇದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *