ಹಾಸನ: ಮೇ 10ರಂದು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಮತ ಯಂತ್ರಗಳನ್ನು ನಗರದ ಸರ್ಕಾರಿ ಇಂಜಿನಿಯರಿಂಗ್ ಕಟ್ಟಡದ ಸ್ಟ್ರಾಂಗ್ ರೂಮ್ ನಲ್ಲಿ ಬಿಗಿ ಭದ್ರತೆಯೊಂದಿಗೆ ಇರಿಸಲಾಗಿದೆ.
ಜಿಲ್ಲೆಯ ಹಾಸನ, ಅರಕಲಗೂಡು, ಸಕಲೇಶಪುರ, ಬೇಲೂರು, ಅರಸೀಕೆರೆ, ಶ್ರವಣಬೆಳಗೊಳ, ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಗಳಲ್ಲಿನ 2,000 ಮತ ಕೇಂದ್ರಗಳಲ್ಲಿ ನಡೆಸಲಾದ ಮತದಾನದ ಇವಿ ಯಂತ್ರಗಳನ್ನು ಏಳು ವಿಧಾನಸಭಾ ಕ್ಷೇತ್ರಗಳಿಂದ ಸಂಗ್ರಹಿಸಿ ಇಂಜಿನಿಯರಿಂಗ್ ಕಾಲೇಜ್ ಕಟ್ಟಡದಲ್ಲಿ ಇಡಲಾಗಿದ್ದು ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಕಟ್ಟಡದ ಸ್ಟ್ರಾಂಗ್ ರೂಮ್ ಸಮೀಪ ಹಾಗೂ ಕಟ್ಟಡದ ಹೊರಗಡೆ ಮಿಲಿಟರಿ, ಪೊಲೀಸ್ ಹಾಗೂ ಅರೆ ಸೇನಾಪಡೆಯ ಬಿಗಿ ಭದ್ರತೆ ಏರ್ಪ ಡಿಸಿದ್ದು, ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾರ್ಚ್ 13ರಂದು ಶನಿವಾರ ಬೆಳಗ್ಗೆ 7 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳು ಹೆಚ್ಚಿದೆ.