ಹಾಸನ: ಮತದಾನವು ನಮ್ಮ ಮೂಲಭೂತ ಹಕ್ಕಾಗಿದ್ದು, ಪ್ರತಿಯೊಬ್ಬರೂ ಮತದಾನ ಮಾಡುವಂತೆ ಸಕಲೇಶಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಅವರು ತಿಳಿಸಿದ್ದಾರೆ.
ಸಕಲೇಶಪುರ ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ಸಕಲೇಶಪುರ ತಾಲೂಕು ಪಂಚಾಯಿತಿ ಆವರಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ್‍ಯಾಲಿ ಮಾಡುವ ಮೂಲಕ ೧೮ ವರ್ಷದ ಮೇಲ್ಪಟ್ಟ ಹಾಗೂ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಇದೇ ವೇಳೆ ಸಕಲೇಶಪುರ ಸಹಾಯಕ ನಿರ್ದೇಶಕರಾದ ಆದಿತ್ಯ, ಹರೀಶ, ತಾಲೂಕು ಅಕ್ಷರ ದಾಸೋಹ ಅಧಿಕಾರಿ ಮಂಜುನಾಥ, ತಾಲೂಕು ಐ.ಇ.ಸಿ ಸಂಯೋಜಕ ರಂಗನಾಥ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.