ಆಲೂರು: ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿರುವ ಹಿನ್ನಲೆಯಲ್ಲಿ ತಾಲೂಕು ಮಾದಿಗ ದಂಡೋರ ಸಮಿತಿ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಹರ್ಷಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕು ಮಾದಿಗ ದಂಡೋರ ಸಮಿತಿ ಉಪಾಧ್ಯಕ್ಷ, ಪ.ಪಂ ಮಾಜಿ ಉಪಾಧ್ಯಕ್ಷ ಶಿವಣ್ಣ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ತಡರಾತ್ರಿ ಮೀಸಲಾತಿಯನ್ನು ಪ್ರಕಟಿಸಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯಕ್ಕೆ ಒಣ ಮೀಸಲಾತಿಯನ್ನು ಜಾರಿ ಮಾಡಿದೆ. ಕಳೆದ ಮೂರು ದಶಕಗಳಿಂದ ಒಳ ಮೀಸಲಾತಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಜಾರಿ ಮಾಡುವಂತೆ ಒತ್ತಾಯಿಸಿದ್ದರೂ ಸಹ ಇಲ್ಲಿಯವರೆಗೂ ಒಳ ಮೀಸಲಾತಿ ನೀಡಿರಲಿಲ್ಲ.
ಇದೀಗ ರಾಜ್ಯ ಬಿಜೆಪಿ ಸರ್ಕಾರ ಒಳಮಿಸಲಾತಿಯನ್ನು ನೀಡಿದ್ದು, ಆಯೋಗ ನೀಡಿರುವ ಒಳ ಮೀಸಲಾತಿಯನ್ನು ಯಥಾ ಪ್ರಕಾರ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಒತ್ತಾಯಿಸಿದ್ದರು ಹಾಗೂ ಒಳ ಮೀಸಲಾತಿಯನ್ನು ಪ್ರಕಟಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಪುಟ್ಟರಾಜು, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ವೀರಭದ್ರಯ್ಯ, ಮುಖಂಡರುಗಳಾದ ವೆಂಕಟಯ್ಯ, ನಿವೃತ್ತ ಶಿಕ್ಷಕ ಮಂಜುನಾಥ, ರಂಗಯ್ಯ ಅಜ್ಜೇನಹಳ್ಳಿ, ರಾಮು, ಮಹಾಭೋದಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಶಿವಾನಂದ, ಕಾರ್ಯದರ್ಶಿ ಮಂಜುನಾಥ ಹೊಸಹಳ್ಳಿ, ಪುಟ್ಟಯ್ಯ, ಜೇಮ್ಸ್, ಚನ್ನವೀರಯ್ಯ, ಪ್ರಕಾಶ, ಭದ್ರಯ್ಯ, ಪುಟ್ಟರಾಜು, ಬೈರೇಶ್, ರಘು ಸೇರಿದಂತೆ ಇತರರು ಇದ್ದರು.