ಹಾಸನ: ಜಿಲ್ಲಾ ಒಕ್ಕಲಿಗರ ವೇದಿಕೆಯ ಮೊದಲನೇ ವರ್ಷದ ವಾರ್ಷಿಕೋತ್ಸವವನ್ನು ಮಾ. 25ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ವೇದಿಕೆಯ ಅಧ್ಯಕ್ಷ ರಾಜೇಶ ಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ವಿದ್ಯಾನಗರದಲ್ಲಿರುವ ಎನ್.ಪಿ.ಎನ್ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಒಕ್ಕಲಿಗ ಮುಖಂಡರು, ಮುಖಂಡರು, ಮಠಾಧೀಶರು, ಗುರುಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷ ಅಕರ್ಷಣೆಯಾಗಿ ಜಿ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ತಂಡದವರಿಂದ ಹಾಸ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮಾಜದವರ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಗುವುದು. ಪ್ರತಿಯೊಬ್ಬ ಸಮಾಜದ ಬಾಂಧವರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಘಟಕದ ಗೌರವ ಅಧ್ಯಕ್ಷೆ ಮಂಜುಳಾ, ಕುಮಾರ್, ದೇವರಾಜು , ಸುರೇಶ ಕೆ ಟಿ, ಭಾರತಿ ವಿ.ಆರ್, ಸ್ವಪ್ನ ಗೋಪಾಲ ಇತರರು ಇದ್ದರು.