ಬೇಲೂರು: ಮರಳು ತುಂಬಿದ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೇಲೂರಿನಲ್ಲಿ ನಡೆದಿದೆ.
ಪಟ್ಟಣದ ನಂಜೇಗೌಡರ ರೈಸ್ ಮಿಲ್ ಹತ್ತಿರ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಗೊಟ್ರವಳ್ಳಿ ಗ್ರಾಮದ ಹರೀಶ್(32) ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ದಿನನಿತ್ಯ ಪಟ್ಟಣದಲ್ಲಿ ಕೂಲಿ ಕೆಲಸ ಮಾಡಲು ಬರುತ್ತಿದ್ದರು ಎಂದು ತಿಳಿದು ಬಂದಿದೆ. ಲಾರಿ ಚಾಲಕ ಪರಾರಿಯಾಗಿದ್ದು ಬೇಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.