ಹಾಸನ: ನಾಯಕ ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ತಾಲೂಕಿನ ಬಿಲಗುಂದ ಗ್ರಾಮದಲ್ಲಿ ನಡೆದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿಮಾನಿಯಾಗಿರುವ ಬಿಲಗುಂದ ಗ್ರಾಮದ ರಘು(ಅಪ್ಪು) ಎಂಬುವವರು ಪುನೀತ್ ರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಗ್ರಾಮದ ಹಾಸನ-ಶೆಟ್ಟಿಹಳ್ಳಿ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದರು. ಆದರೆ ಇದನ್ನು ಸಹಿಸದ ಕೆಲವು ಕಿಡಿಗೇಡಿಗಳು ಬ್ಯಾನರ್ ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.
ಈ ಕುರಿತು ಮಾತನಾಡಿದ ಶಿವರಾಜ್ ಕುಮಾರ್ ಅಭಿಮಾನಿ ರಘು (ಅಪ್ಪು), ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆ ಶುಭಾಶಯ ಕೋರಿ ಪುನೀತ್ ರಾಜ್ ಕುಮಾರ್ ಭಾವಚಿತ್ರದೊಂದಿಗೆ ನನ್ನ ಫೋಟೋ ಇರುವ ಬ್ಯಾನರ್ ಹಾಕಿದ್ದೆ. ಇದನ್ನು ಸಹಿಸದ ಗ್ರಾಮದ ಕೆಲವು ದುಷ್ಕರ್ಮಿಗಳು ಬ್ಯಾನರ್ ಗೆ ಬೆಂಕಿ ಹಾಕುವ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.