ಹಾಸನ: ಮನೆಯಲ್ಲಿಟ್ಟಿದ್ದ ಒಡವೆ ಕಳ್ಳತನ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿ ಎರಡೂವರೆ ಲಕ್ಷ ಮೌಲ್ಯದ 52 ಗ್ರಾಂ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಹರಿರಾಮ್ ಶಂಕರ ತಿಳಿಸಿದ್ದಾರೆ.
ತಾಲ್ಲೂಕಿನ ದುಂಡನಾಯಕನಹಳ್ಳಿ ಗ್ರಾಮದ ದಿಲೀಪ್ ಅವರ ಮನೆಯಲ್ಲಿ ಒಡವೆ ಕಳ್ಳತನ ಪ್ರಕರಣ ಕುರಿತು ಮಾರ್ಚ್ ೮ ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ಕೈಗೊಂಡು ಕಡಿಮೆ ಅವಧಿಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ತಿಳಿಸಿದರು.