ಸಕಲೇಶಪುರ: ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ಬೊಮ್ಮನಕೆರೆ ಗ್ರಾಮದ ವಡ್ಡರಹಳ್ಳಿಯಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ವಡ್ಡರಹಳ್ಳಿ ಗ್ರಾಮದ ಷಣ್ಮುಖ ಎಂಬುವವರ ಮನೆ ಬೀಗ ಮುರಿದು ಬೀರುವಿನಲ್ಲಿದ್ದ ಎರಡು ಚಿನ್ನದ ಉಂಗುರ ಸೇರಿದಂತೆ ಒಂದು ಲಕ್ಷ ಹಣ ದೋಚಿದ್ದಾರೆ. ಷಣ್ಮುಖ ಅವರು ಸಕಲೇಶಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಶೀಘ್ರದಲ್ಲೇ ಕಳ್ಳತನ ಮಾಡಿದವರನ್ನು ಹಿಡಿಯಲಾಗುವುದು ಎಂದು ತಿಳಿಸಿದರು.