ಶ್ರವಣಬೆಳಗೊಳ: ಪಟ್ಟಣದ ಜೈನ ಮಠದ ಚಾವುಂಡರಾಯ ವೇದಿಕೆಯಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ಶುಕ್ರವಾರ ನೆರವೇರಿತು.
ಕಾರ್ಯಕ್ರಮದಲ್ಲಿ ಕಾರ್ಕಳ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿ ಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿ ಮಠದ ಸ್ವಸ್ತಿಶ್ರೀ ಧವಲಕೀರ್ತಿ ಭಟ್ಟಾರಕ ಸ್ವಾಮೀಜಿ, ಮೂಡಬಿದ್ರೆ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ವರೂರು ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ಹೊಂಬುಜ ಮಠದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ಸೋಂದಾ ಮಠದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ, ನರಸಿಂಹರಾಜಪುರ ಮಠದ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ, ನಾಂದಿಣಿ ಮಠದ ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಸ್ವಾಮೀಜಿ, ಆರತಿಪುರ ಮಠದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿ ಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ, ಕೊಲ್ಲಾಪುರ ಮಠದ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ಹಾಗೂ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತರಿದ್ದರು.
ಶ್ರವಣಬೆಳಗೊಳ ಮಠದ ಉತ್ತರಾಧಿಕಾರಿಯಾಗಿ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಗೆ ಮಾ. 27ರಂದು ಸೋಮವಾರ ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಲಿದೆ.