ಹಾಸನ: ಬಿಸಿಲಿನ ತಾಪಕ್ಕೆ ಕಾದ ಹಂಚಿನಂತಾಗಿದ್ದ ಧರೆಗೆ ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಮಳೆ ಸುರಿದಿದೆ. ಬಿಸಿಲಿನಿಂದ ತತ್ತರಿಸಿದ್ದ ಭೂಮಿ ಕೊಂಚ ತಣ್ಣಗಾಗಿದ್ದು, ಹಾಸನ, ಬೇಲೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಉತ್ತಮವಾಗಿ ಮಳೆ ಸುರಿದಿದೆ.
ಜಿಲ್ಲಾ ಕೇಂದ್ರದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. 3.10 ಗಂಟೆಯ ಸುಮಾರಿಗೆ 10 ನಿಮಿಷಕ್ಕೂ ಹೆಚ್ಚು ಕಾಲ ಉತ್ತಮವಾಗಿ ಮಳೆ ಸುರಿಯಿತು. ನಗರದ ಪ್ರಮುಖ ರಸ್ತೆಗಳ ಮೇಲೆ ಕೊಂಚ ನೀರು ಹರಿದು ತಂಪಾದ ವಾತಾವರಣ ನಿರ್ಮಾಣವಾಯಿತು.