ಹಾಸನ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 15 ಅಭ್ಯರ್ಥಿಗಳಿಂದ ಒಟ್ಟು 21 ನಾಮಪತ್ರಗಳು ಸಲ್ಲಿಕೆಯಾಗಿವೆ.
193-ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಗಳಾಗಿ ನಟರಾಜು, ಸುಬ್ರಹ್ಮಣ್ಯ ಹಾಗೂ ಎಂ.ಜಿ ನಂಜೇಗೌಡ, ಬಿ.ಜೆ.ಪಿ ಅಭ್ಯರ್ಥಿ ಚಿದಾನಂದ ಸಿ.ಆರ್, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಪವಿತ್ರ ಜಿ.ಕೆ ಇವರು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
194- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿ.ಜೆ.ಪಿ ಪಕ್ಷದ ಜಿ.ವಿ. ಬಸವರಾಜು, ಲೋಕಶಕ್ತಿ ಪಕ್ಷದ ಅಭ್ಯರ್ಥಿ ಹೊಳೆಯಪ್ಪ, ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿ ಉಮೇಶ್ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
195-ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ಬಿ.ಎಸ್.ಪಿ ಪಕ್ಷದಿಂದ ಗಂಗಧಾರ್ ಡಿ ಎಸ್ ನಾಮಪತ್ರ ಸಲ್ಲಿಸಿದ್ದಾರೆ.
197-ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೆಯಸ್ ಎಂ. ಪಟೇಲ್ ಹಾಗೂ ಬಿ.ಎಸ್.ಪಿ ಅಭ್ಯರ್ಥಿ ತಾರೇಶ್ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
198-ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗಾರಮೇಶ್, ಪಕ್ಷೇತರ ಅಭ್ಯರ್ಥಿಗಳಾಗಿ ಎ.ಎಂ.ಮಲ್ಲೇಶ್ ಹಾಗೂ ವಿಜಯ ಭಾರತಿ, ಭಾರತೀಯ ಡಾ| ಬಿ.ಆರ್ ಅಂಬೇಡ್ಕರ್ ಜನತಾ ಪಕ್ಷದ ಅಭ್ಯರ್ಥಿ ಎಚ್.ಪಿ ಮಂಜುನಾಥ್ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
199-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಮಂಜುನಾಥ ಎರಡು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿ ರವಿ ಜಿ.ಸಿ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅರ್ಚನಾ ಎಂ.ಎಸ್. ಅವರು ತಿಳಿಸಿದ್ದಾರೆ.