News Karnataka
ರಾಜಕೀಯ

ಕಾಂಗ್ರೆಸ್ ಪಕ್ಷದ ವಾಗ್ದಾನ ಪೂರೈಸಲು ಬದ್ದ: ಎಚ್.ಎಸ್.ವಿಜಯಕುಮಾರ್

A felicitation ceremony was held for Girish in Hassan and Congress Guarantee card distribution of Congress party was held in Hassan.
Photo Credit : Bharath

ಚನ್ನರಾಯಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಜೊತೆಗೆ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿರುವ ವಾಗ್ದಾನದಂತೆ ಮೂರು ಪ್ರಮುಖ ಅಂಶಗಳಾದ ತಲಾ ಹತ್ತು ಕೆಜಿ ಅಕ್ಕಿ, ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಹಾಗೂ ಕುಟುಂಬವೊಂದಕ್ಕೆ ಇನ್ನೂರು ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ಪೂರೈಸಲಾಗುವುದೆಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಚ್‌. ಎಸ್. ವಿಜಯಕುಮಾರ್ ತಿಳಿಸಿದರು.

ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಅಗ್ರಹಾರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಗಿರೀಶ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗೆ ಭೇಟಿ ನೀಡಿ ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದ ಅವಧಿಯಲ್ಲಿ ೧೭೦ಕ್ಕೂ ಹೆಚ್ಚು ವಾಗ್ದಾನಗಳನ್ನು ಅನುಷ್ಠಾನಗೊಳಿಸಿದ್ದಾರೆ, ಅದರಂತೆ ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಜಯಗಳಿಸಿ ಪಕ್ಷ ಅಧಿಕಾರಕ್ಕೆ ಬರಲಿದೆ. ಆದ್ದರಿಂದ ಮತದಾರರು ತಮ್ಮ ಮತವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ಗ್ಯಾರಂಟಿ ವಿತರಣೆ ವೇಳೆ ನೂರಾರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು, ಹಲವಾರು ಮಹಿಳೆಯರು ಮಾತನಾಡಿದರು. ಮಹಿಳೆಯರ ಮನವಿಯನ್ನು ಆಲಿಸಿದ ಪಕ್ಷದ ಮುಖಂಡರುಗಳು ಈ ಬಗ್ಗೆ ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಕ್ಷದ ವರಿಷ್ಠರಿಗೆ ತಿಳಿಸುವುದಾಗಿ ಭರವಸೆ ನೀಡಿದರು.

ಗ್ಯಾರಂಟಿ ಕಾರ್ಡು ವಿತರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಿ ಎಸ್ ಪುಟ್ಟೇಗೌಡ, ಮಾಜಿ ಎಂಎಲ್ಸಿ ಎಂ.ಎ ಗೋಪಾಲ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಎಂ ರಾಮ ಚಂದ್ರು, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ ಶಂಕರ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಚ್ ವಿಜಯ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್ ಡಿ ಕಿಶೋರ್, ಕಾಂಗ್ರೆಸ್ ಪಕ್ಷದ ಮುಖಂಡ ಬಾಗೂರು ಮಂಜೇ ಗೌಡ, ಕಾಂಗ್ರೆಸ್ ಯುವ ಮುಖಂಡ ಯುವರಾಜ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಕಲ್ಕೆರೆ ಮೋಹನ್, ಮಿಲ್ಟ್ರಿ ಮಂಜುನಾಥ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಪುನೀತ್, ಮುಖಂಡರುಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಗ್ರಹಾರ ಗ್ರಾಮಸ್ಥರು ಹಾಜರಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *