ಅರಕಲಗೂಡು: ವಿಧಾನ ಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎ.ಮಂಜು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಟ್ಟಣದ ಕೊತ್ತಲು ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು.
ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇನ್ನು ಮುಂದೆ ನನ್ನ ಬೆಂಬಲಿಗರೆಲ್ಲರೂ ಜೆಡಿಎಸ್ ಕಾರ್ಯಕರ್ತರೆಂದು ಗುರುತಿಸಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದು, ಅವರನ್ನು ಅಧಿಕಾರಕ್ಕೆ ತರಲು ಇಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದರು. ಪಟ್ಟಣದಲ್ಲಿ ಜೆಡಿಎಸ್ ಮುಖಂಡರಿದ್ದರೂ ಪ್ರತಿ ಚುನಾವಣೆಯಲ್ಲೂ ಹೆಚ್ಚಿನ ಲೀಡ್ ನನಗೆ ದೊರೆಯುತ್ತಿತ್ತು. ಈ ಬಾರಿ ಜೆಡಿಎಸ್ ಮುಖಂಡರೂ ನನ್ನ ಪರವಾಗಿರುವುದರಿಂದ ಇನ್ನೂ ಹೆಚ್ಚಿನ ಬಹುಮತ ದೊರಕುವುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.