ಹಾಸನ: ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಮೂಲಕ ಆಲೂರು-ಸಕಲೇಶಪುರ-ಕಟ್ಟಾಯ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗುವಂತೆ ಸಂಸದ ಡಿ.ಕೆ.ಸುರೇಶ ಕರೆ ನೀಡಿದರು.
ಅವರು ಕಟ್ಟಾಯದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನೀವು ಕಾಂಗ್ರೆಸ್‌ಗೆ ಮತ ನೀಡುತ್ತೀರಾ ಎಂದು ಜೆಡಿಎಸ್ ನಾಯಕರು ಕಟ್ಟಾಯವನ್ನು ಸಕಲೇಶಪುರ ಕ್ಷೇತ್ರಕ್ಕೆ ಸೇರಿಸಿದ್ದಾರೆ ಎಂದ ಅವರು, ಅವರಿಂದ ಏನು ಆಗುತ್ತದೆ ಎಂದು ಮೂರು ಬಾರಿ ಬೆಂಬಲಿಸಿದ್ದೀರಿ ಎಂದು ಜೆಡಿಎಸ್ ಶಾಸಕ ಹಾಗೂ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಆದಂತಹ ಅಭಿವೃದ್ಧಿಯು ಆಗಿಲ್ಲ ಮುಂದಿನ ಬಾರಿಯಾದರೂ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಜೆಡಿಎಸ್ ನಾಯಕರು ನಿಮ್ಮನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಈವರೆಗೆ ಕ್ಷೇತ್ರದ ಅಭಿವೃದ್ದಿಗೆ ಗಮನ ನೀಡಿಲ್ಲ. ನೀವು ಗುಲಾಮಗಿರಿಯಿಂದ ಹೊರ ಬರಲು ಕಾಂಗ್ರೆಸ್ ಬೆಂಬಲಿಸಿ ಎಂದು ಕರೆ ನೀಡಿದರು.
ನಿಮ್ಮ ಮನೆ ಬಾಗಿಲು ಕಾಯಲು ಅವಕಾಶ ಕೊಡಿ ಎಂದು ವೇದಿಕೆಯ ಮೇಲೆ ನಿಂತು ಕೈ ಮುಗಿದು ಕೇಳಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಮುರಳಿ ಮೋಹನ, ಸತತವಾಗಿ ಮೂರು ಬಾರಿ ಗೆಲುವು ಸಾಧಿಸಿರುವ ಜೆಡಿಎಸ್ ಅಭ್ಯರ್ಥಿ ಹಾಲಿ ಶಾಸಕ ಎಚ್. ಕೆ. ಕುಮಾರಸ್ವಾಮಿ ನಾಗಾಲೋಟಕ್ಕೆ ಬ್ರೇಕ್ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ವೇಳೆ ಕಾಂಗ್ರೆಸ್ ವಕ್ತಾರರಾದ ವಕೀಲ ದೇವರಾಜೇಗೌಡ, ಹುಡಾ ಮಾಜಿ ಅಧ್ಯಕ್ಷ ಕೃಷ್ಣಕುಮಾರ ಮತ್ತಿತರರಿದ್ದರು.