ಹಾಸನ: ದ್ವೇಷದ ರಾಜಕಾರಣ ಸಾಕು. ಶಿಕ್ಷಣ, ಉದ್ಯೋಗ, ಪ್ರೀತಿಯ ರಾಜಕಾರಣ ಬೇಕು ಎಂದು ಎಸ್‌ಐಓ ರಾಜ್ಯ ಕಾರ್ಯದರ್ಶಿ ಅಫ್ಘಾನ್ ಹೂಡೆ ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, 2023ರ ಈ ಬಾರಿಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ-ಯುವಜನರ ಬೇಡಿಕೆಯ ವಿಚಾರಗಳನ್ನು ಸೇರಿಸಲು ಮತ್ತು ಈ ಹಕ್ಕೊತ್ತಾಯಗಳೇ ಯುವಜನರ ಮತಗಳನ್ನು ನಿರ್ಣಯಿಸುವಂತೆ ಜನಾಭಿಪ್ರಾಯ ಮೂಡಿಸಲು ಎಸ್‌ಐಓ ಕರ್ನಾಟಕವು ಶಿಕ್ಷಣದ ಮೂಲ ಭಾಗಿದಾರರೊಂದಿಗೆ ಸಮಾಲೋಚಿಸಿ “ವಿದ್ಯಾರ್ಥಿ ಪ್ರಣಾಳಿಕೆಯನ್ನು ತಯಾರಿಸಿದೆ.
ಪಕ್ಷಗಳು ಈ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮತ್ತು ಬದ್ಧತೆಯನ್ನು ಖಚಿತಪಡಿಸಬೇಕು ಎಂದು ಹೇಳಿದರು. ಈಗಾಗಲೇ ಜೆಡಿಎಸ್ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ನಮ್ಮ ಪ್ರಣಾಳಿಕೆಯನ್ನು ತಿಳಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರಿಗೂ ಪ್ರಣಾಳಿಕೆಯ ಉದ್ದೇಶವನ್ನು ತಿಳಿಸಲಾಗುವುದು. ಹಾಲಿ ಸರ್ಕಾರ ಹಾಗೂ ಚುನಾವಣೆ ನಂತರ ಅಸ್ತಿತ್ವಕ್ಕೆ ಬರುವ ಸರ್ಕಾರಗಳು ಈ ಬಗ್ಗೆ ಗಮನಹರಿಸಿ, ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡಬೇಕು ಹಾಗೂ ಹಾಲಿ ಜಾರಿಯಲ್ಲಿರುವ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ಕ್ರಮವಹಿಸಲಿ ಎಂದು ಈ ಮೂಲಕ ಮನವಿ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಬೀದ್, ನವ್ ಮಾನ್ ರಶೀದ್, ಸಮೀರ್ ಇದ್ದರು.