ಬೇಲೂರು: ಬೇಲೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವರೊಬ್ಬರದು ಎನ್ನಲಾದ ಆಡಿಯೋ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ತಮ್ಮದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅದು ತಮ್ಮ ದ್ವನಿ ಅಲ್ಲ, ಆದರೂ ಚುನಾವಣೆ ಸಂದರ್ಭದಲ್ಲಿ ತನಗೆ ಆಗುತ್ತಿರುವ ವೈಯಕ್ತಿಕ ತೇಜೋವಧೆ ನಿಲ್ಲಿಸಲಿ, ವಿವಿಧ ಸುದ್ದಿ ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ, ಪ್ರಸಾರ ಮಾಡಿದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಅವರ ಪರ ವಕೀಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಷ್ಟು ದಿನ ಇಲ್ಲದ ಆಡಿಯೋವೊಂದನ್ನು ಚುನಾವಣೆ ಸಂದರ್ಭದಲ್ಲಿ ಹರಿಬಿಟ್ಟಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ಇದ್ದು, ಇದು ಈ ಸಂದರ್ಭದಲ್ಲಿ ಫಲಿಸುವುದಿಲ್ಲ ಎಂಬುವುದು ಹಿರಿಯ ರಾಜಕೀಯ ಮುಖಂಡರ ಅಭಿಪ್ರಾಯವಾಗಿದೆ.
ಖಾಸಗಿ ಜೀವನದ ಬಗ್ಗೆ ತೇಜೋವಧೆ ಮಾಡುವುದನ್ನು ಬಿಟ್ಟು ನಿಜವಾದ ರಾಜಕೀಯ ಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂಬುವುದು ಹಿರಿಯರ ಅಭಿಪ್ರಾಯವಾಗಿದೆ. ಸರಳ- ಸಜ್ಜನಿಕೆಯ, ರಾಜಕೀಯವಾಗಿ ಅಪಾರ ಅನುಭವ ಹೊಂದಿರುವವರ ಬೆಳವಣಿಗೆ, ಸಂಘಟನೆಯನ್ನು ಸಹಿಸದ ಕೆಲವರು ಅವರ ಹೆಸರಿನಲ್ಲಿ ಆಡಿಯೋ, ವಿಡಿಯೋಗಳನ್ನು ಹೇಗೆ ಬೇಕು ಹಾಗೆ ಎಡಿಟ್ ಮಾಡಬಹುದು, ಇಂತಹ ಸಂದರ್ಭದಲ್ಲಿ ಈ ಬೆಳವಣಿಗೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಯಾರಿಗೂ ಶೋಭೆ ತರುವುದಿಲ್ಲ ಎಂಬುವುದು ಎಲ್ಲರ ಅಭಿಪ್ರಾಯವಾಗಿದೆ.