ಹಾಸನ: ಬಿಜೆಪಿ ಹೈಕಮಾಂಡ್ ಅಳೆದು ತೂಗಿ 198 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿ ಯಾವ ಯಾವ ಅಭ್ಯರ್ಥಿಗಳ ಹೆಸರಿರಲಿದೆ ಎಂಬ ಕುತೂಹಲ ಮುಂದುವರಿದಿದೆ.
ಈ ನಡುವೆ ಹಾಸನ ವಿಧಾನಸಭಾ ಕ್ಷೇತ್ರದ ಏಳು ಅಭ್ಯರ್ಥಿಗಳ ಪೈಕಿ ಐದು ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಲಾಗಿದೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಯಾರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಿದ್ದಾರೆ ಎಂಬ ಕುತೂಹಲ ಮುಂದುವರೆದಿದೆ.
ಎನ್ ಆರ್ ಸಂತೋಷ್ ಅವರಿಗೆ ಟಿಕೆಟ್ ಕೈತಪ್ಪುವ ಕುರಿತು ಮಾತುಗಳು ಜಿಲ್ಲಾ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಕೇಂದ್ರ ನಾಯಕರು ಉತ್ತಮ ಅಭ್ಯರ್ಥಿಗಳ ಹುಡುಕಾಟದಲ್ಲಿ ಇದ್ದು, ಸಂತೋಷ್ ಹೊರತಾಗಿ ಇತರೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮರಿಸ್ವಾಮಿ ಅಥವಾ ಸಿದ್ದೇಶ್ ನಾಗೇಂದ್ರ ಅವರನ್ನು ಆಯ್ಕೆ ಮಾಡಬಹುದು ಎಂಬ ಮಾತುಗಳು ಸಹ ಕೇಳಿ ಬರುತ್ತದೆ.