ಹಾಸನ: ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ತಾಲೂಕಿನ ಕಂದಲಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಅವರು ಪಕ್ಷದ ಮುಖಂಡರೊಂದಿಗೆ ನೂರಾರು ಸಂಖ್ಯೆ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಚುನಾವಣಾ ಪ್ರಚಾರ ಕೈಗೊಂಡರು. ಪ್ರಚಾರದ ವೇಳೆ ಹೋದ ಕಡೆಯಲ್ಲಾ ಮಹಿಳೆಯರು ಆರತಿ ಬೆಳಗಿ ಸ್ವಾಗತ ಮಾಡುತ್ತಿದ್ರು.
ಕಾಂಗ್ರೆಸ್ ಸರಕಾರದಿಂದ ಬಿಡುಗಡೆ ಮಾಡಿರುವ ಪ್ರಣಾಳಿಕೆಯಾದ 200 ಯೂನಿಟ್ ಉಚಿತ ವಿದ್ಯುತ್, ಯುವಕರಿಗೆ 3000 ನಿರುದ್ಯೋಗ ಭತ್ಯೆ, ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಸೇರಿದಂತೆ ಪ್ರಮುಖ ಆಶ್ವಾಸನೆಗಳನ್ನು ಈ ಪ್ರಣಾಳಿಕೆ ಒಳಗೊಂಡಿದೆ. ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ-ಕುಂಕುಮ ಹಚ್ಚಿ, ವೀಳ್ಯದೆಲೆ ಅಡಿಕೆ ಇಟ್ಟು ಸಾಂಪ್ರದಾಯಿಕವಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವುದನ್ನು ಜನರಿಗೆ ಮುಟ್ಟಿಸಲಾಯಿತು.