ಹಾಸನ: ಓರ್ವ ಸಾಮಾನ್ಯ ಕಾರ್ಯಕರ್ತರನ್ನು ಒಪ್ಪಿ ಶಾಸಕನಾಗಿ ಮಾಡಿದ ಹಾಸನ ಕ್ಷೇತ್ರದಲ್ಲಿ ಈ ಬಾರಿಯೂ ಪ್ರೀತಮ್ ಗೌಡ ಅವರು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಬಿ.ವೈ ವಿಜಯೇಂದ್ರ ತಿಳಿಸಿದರು.
ಭುವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಬಲ್ ಇಂಜಿನ್ ಆಡಳಿತದಲ್ಲಿ ರಾಜ್ಯ ಸರ್ಕಾರದಿಂದ ಬಂದಂತಹ ಅನುದಾನವನ್ನು ಸಮರ್ಥವಾಗಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರು ಬಳಸಿಕೊಂಡಿದ್ದಾರೆ. ರಾಜ್ಯ ಸರ್ಕಾರದಿಂದ ಸಾವಿರಾರು ಕೋಟಿ ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ಕೊಡಲಾಗಿದೆ. ಮೋದಿ ನಾಯಕತ್ವವನ್ನು ದೇಶದ ಜನರು ಒಪ್ಪಿದ್ದು, ಈ ಬಾರಿಯೂ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಕರ್ನಾಟಕ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.