ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಪರವಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶ್ರೀಮತಿ ಸಿ.ಕೆ ಕುಸುಮರಾಣಿ ಅವರು ತಾಲೂಕಿನ ಬಾಗುರು ಹೋಬಳಿಯ ಎಂ ಶಿವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಇದೇ ಸಂದರ್ಭದಲ್ಲಿ ಟಿಎಪಿಎಂಎಸ್‌ನ ಅಧ್ಯಕ್ಷರಾದ ಕುಂಬಾರಹಳ್ಳಿ ರಮೇಶ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಬಾಗೂರು ಶಿವಣ್ಣ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಮರಿದ್ಯಾವೇಗೌಡ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪುರುಷೋತ್ತಮ, ಉಮೇಶ ಗೋವಿನಕೆರೆ, ರಾಮಕೃಷ್ಣ ಹೊಂಗೆಹಳ್ಳಿ, ಗ್ರಾಮ ಪಂಚಾಯತಿ ಸದಸ್ಯರಾದ ಶಿವರಾಜ, ನಂಜೇಶಿ, ಜೆಡಿಎಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.