ಬೇಲೂರು: ತಾಲೂಕು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಿ ಶಿವರಾಂ ಅವರು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಬುಧವಾರದಂದು ಮತ್ತೊಮ್ಮೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಇನ್ನೊಂದು ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ. ಹೆಚ್. ಲಕ್ಷ್ಮಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಜಿ ನಿಶಾಂತ್, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ ಆರ್ ವೆಂಕಟೇಶ, ಮಾಜಿ ಜಿಪಂ ಸದಸ್ಯ ಸೈಯದ್ ತೌಫಿಕ್ ಅವರೊಂದಿಗೆ ಆಗಮಿಸಿ ಚುನಾವಣಾಧಿಕಾರಿ ರಮೇಶ್ ಹಾಗೂ ಸಹಾಯಕ ಚುನಾವಣಾಧಿಕಾರಿ ಎಂ. ಮಮತಾ ಅವರಿಗೆ ನಾಮಪತ್ರ ಸಲ್ಲಿಸಿದರು.