News Karnataka
Saturday, June 10 2023
ರಾಜಕೀಯ

ಮನೆ ಮನೆಗೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

Congress Guarantee Card will be distributed door to door in Hassan district.
Photo Credit : Bharath

ಹಾಸನ: ಇಂದು ಜಿಲ್ಲೆಯ ಎಲ್ಲಾ ಮನೆ ಮನೆಗಳಿಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡ್‌ಗಳನ್ನ ಹಂಚಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಹೇಳಿ ಹೇಳಿ ಯಾರು ನಂಬಬೇಕೋ ಗೊತ್ತಾಗದ ಸ್ಥಿತಿಯಲ್ಲಿದ್ದಾರೆ. ನಾವು ಹಿಂದೆ ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಈಗಾಗಲೇ ಪ್ರಕಟಿಸಿರುವ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಎಲ್ಲ ಮನೆಗಳ ಯಜಮಾನಿಯರಿಗೆ 2000 ರೂ. ನೀಡುವ ಯೋಜನೆ ಸಹಿತ ಪ್ರಣಾಳಿಕೆ ಇರುವ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸಿ ಅವರಿಂದ ಸ್ವೀಕೃತಿಯನ್ನ ಪಡೆದುಕೊಳ್ಳಲಾಗುವುದು. ಇದಕ್ಕಾಗಿ ಎಲ್ಲ ಬೂತ್ ಮಟ್ಟದ ಸಮಿತಿಗಳನ್ನು ಸಂಘಟಿಸಲಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ತಿಂಗಳಿನಿಂದಲೇ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಘೋಷಣೆ ಮಾಡಿದೆ ಎಂದರು.

ಪಕ್ಷದಿಂದ ಈಗಾಗಲೇ ಎರಡು ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆ ಘೋಷಣೆ ಮಾಡಿದ್ದೇವೆ. ಮೂರನೇ ಘೋಷಣೆಯಾಗಿ ಅನ್ನ ಭಾಗ್ಯದ ಅಕ್ಕಿ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ. ಆದ್ದರಿಂದ ಮೂರನೇ ಗ್ಯಾರಂಟಿ ಪ್ರಕಟಿಸುತ್ತಿದ್ದೇವೆ. ಜನರ ಹಸಿವು ನೀಗಿಸಲು ಅನ್ನಭಾಗ್ಯ ಅಕ್ಕಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಕೊಡಲು ಕಾಂಗ್ರೆಸ್ ಮೂರನೇ ಗ್ಯಾರಂಟಿ ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.

ಹಿಂದೆ ಕಾಂಗ್ರೆಸ್ ಅಧಿಕಾರವಧಿಯಲ್ಲಿ 7 ಕೆ.ಜಿ ಅಕ್ಕಿ ಉಚಿತವಾಗಿ ಕೊಡಲು ತೀರ್ಮಾನ ಮಾಡಲಾಗಿತ್ತು. ಬಿಜೆಪಿಯವರು 7ರಿಂದ 5ಕ್ಕೆ ಇಳಿಸಿದರು ಎರಡು ಕೆಜಿ ಕಡಿಮೆ ಮಾಡಿದರು ಎಂದು ದೂರಿದರು. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಬಡ ಮಧ್ಯಮ ವರ್ಗದ ಜನರು ಬದುಕು ನಡೆಸಲು ಹರಸಾಹಸ ಪಡುತ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಕೇವಲ ಅದಾನಿ ಅಂಬಾನಿ ಬೆಳವಣಿಗೆಗೆ ಶ್ರಮಿಸುತ್ತಿದ್ದು ಬಡವರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಬ್ದುಲ್ ಹಕೀಮ್, ಪ್ರಕಾಶ, ಗುರು, ಭೂದೇಶ ಇದ್ದರು.

ಸ್ವರೂಪ್ ಕಾಂಗ್ರೆಸ್ ಸೇರುವ ಬಗ್ಗೆ ಗೊತ್ತಿಲ್ಲ..!!
ಜಿಲ್ಲಾ ರಾಜಕೀಯ ಬೆಳವಣಿಗೆಯಲ್ಲಿ ಎಚ್‌ಪಿ ಸ್ವರೂಪ್ ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಹೇಶ, ಅವರು ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆದಿರುವ ಬಗ್ಗೆ ನನಗೆ ತಿಳಿದಿಲ್ಲ ಹಾಗೇನಾದರೂ ಸನ್ನಿವೇಶಗಳು ಎದುರಾದರೆ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *