ಹಾಸನ: ದಲಿತ ಸಂಘಟನೆಯ ಹಿರಿಯರೆಲ್ಲ ಸೇರಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ದಲಿತ ಮುಖಂಡ ಚೌಡಳ್ಳಿ ಜಗದೀಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ವರ್ಷ ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಲಿತರ ಮತ್ತು ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ಹೆಚ್ಚಿದ್ದು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ದಲಿತ ಸಮುದಾಯದ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ. ಅಲ್ಲದೇ ದಲಿತರಿಗೆ ಹೆಚ್ಚಿನ ಆರ್ಥಿಕ ನೆರವನ್ನು ನೀಡದ ಹಿನ್ನೆಲೆಯಲ್ಲಿ ಈ ಹಿಂದೆ ತಿಳಿಸಿದಂತೆ ನಗರದಲ್ಲಿ ಸಭೆ ನಡೆಸಿದ್ದು ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಖಂಡರೆಲ್ಲಾ ಸೇರಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದರು.
ಹಾಸನ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಆಯಾ ದಲಿತ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುನಿಲ್ ಕುಮಾರ್, ಧರ್ಮ ರಾಜ್, ಚಂದ್ರು, ನವೀನ್, ಸಿದ್ದೇಶ್ ಇದ್ದರು.