ಹಾಸನ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜಾರಿಗೊಳಿಸಲು ಮುಂದಾಗಿರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಗೆ ಮುಖಂಡ ಬನವಾಸೆ ರಂಗಸ್ವಾಮಿ ಅವರ ನೇತೃತ್ವದಲ್ಲಿ ಹಾಸನ ಹೊರ ವಲಯದ ಹನುಮಂತಪುರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.
ಮನೆ ನಿರ್ವಹಣೆಗಾಗಿ ತಿಂಗಳಿಗೆ ಮಹಿಳೆಯರಿಗೆ 2000 ಸಾವಿರ ಪರಿಹಾರ ನೀಡಲು ಮುಂದಾಗಿದೆ. ಪ್ರತಿ ಮನೆಗೂ ಗೃಹ ಜ್ಯೋತಿಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಗ್ಯಾಸ್ ಸಿಲಿಂಡರ್‌ಗೆ 500 ರೂ., ಜಿಎಸ್‌ಟಿ ಪರಿಹಾರಕ್ಕೆ 500 ರೂ. ಬೆಲೆ ಏರಿಕೆಯ ಪರಿಹಾರಕ್ಕೆ 1000 ರೂಪಾಯಿ ಪರಿಹಾರಕ್ಕೆ ಮುಂದಾಗಿದೆ ಎಂದು ಮುಖಂಡರು ತಿಳಿಸಿದರು.
ಈ ವೇಳೆ ಹಿರಿಯ ಮುಖಂಡ ಜವರೇಗೌಡ, ಮಾಧ್ಯಮ ವಕ್ತಾರ ದೇವರಾಜೇಗೌಡ, ಪ್ರಕಾಶ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.