ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಎ ಗೋಪಾಲಸ್ವಾಮಿ ಇಂದು ಬೆಳಗ್ಗೆ ಕೋಟೆ ಬಡಾವಣೆಯಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸಿ ನಂತರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೆಂಗಳೂರು ರಸ್ತೆಯಲ್ಲಿರುವ ಫಿರಂಗಿ ಮಠದ ಹತ್ತಿರದಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆಯು ನಡೆಯಿತು. ಇದರಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹೆಚ್ಚಿನ ರೀತಿಯಲ್ಲಿ ಕಾಂಗ್ರೆಸ್ ಮುಖಂಡರುಗಳು, ಕಾಂಗ್ರೆಸ್ಸಿನ ಮತಬಾಂಧವರು ಹೆಚ್ಚಿನ ರೀತಿಯಲ್ಲಿ ಪಾಲ್ಗೊಂಡಿದ್ದರು.