News Karnataka
ರಾಜಕೀಯ

ಮೋದಿ ಹೇಳಿಕೆ: ದೇವೇಗೌಡರ ಅಸಮಾಧಾನ

HD Deve Gowda arrived in a helicopter to campaign for Arasikere JDS candidate NR Santhosh and spoke to the media.
Photo Credit : Bharath

ಅರಸೀಕೆರೆ: ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ಮತ ನೀಡಿದಂತೆ ಹಾಗೂ ಕಾಂಗ್ರೆಸ್ ಜೊತೆ ಸೇರಿ ಹಣ ಲೂಟಿ ಮಾಡಲು ಜೆಡಿಎಸ್ ಯತ್ನಿಸುತ್ತಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಅಸಮಾದಾನ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನಾನು ಪ್ರಧಾನಿ ನರೇಂದ್ರ ಮೋದಿಯವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲವೆಂದ ಅವರು ಹತ್ತು ವರ್ಷ ಪ್ರಧಾನಿಯಾಗಿ ಈಗ ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡಿದ್ದು ಅವರಿಗೆ ಶೋಭೆ ತರುವುದಿಲ್ಲ ಎಂದರು.

ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಎನ್.ಆರ್ ಸಂತೋಷ್ ಪರ ಮತಯಾಚನೆಗಾಗಿ ಗಂಡಸಿಗೆ ಹೆಲಿಕಾಫ್ಟರ್‌ನಲ್ಲಿ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೇದ ಬಾರಿ ಹಾಸನದಲ್ಲಿ ರಾಹುಲ್ ಗಾಂಧಿ ಏನು ಹೇಳಿಕೆ ನೀಡಿದ್ದರು ಎಂಬುದನ್ನು ನೋಡಿದ್ದೇನೆ ಎಂದ ಅವರು ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಸಂಕಲ್ಪ ಮಾಡಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ತಾವು ಪ್ರವಾಸ ಮಾಡುವುದಾಗಿ ಹೇಳಿದ ಗೌಡರು ಯಾವುದೇ ಕ್ಷೇತ್ರವನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲವೆಂದರು. ಅರಸೀಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ವೇಳೆ ಭವಾನಿ ರೇವಣ್ಣ, ಎನ್.ಆರ್ ಸಂತೋಷ್ ಮತ್ತಿತರರಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *