ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ಬಗೆ ಹರಿಸಲು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ.
ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಹಾಸನ ಕ್ಷೇತ್ರದ ಪ್ರಮುಖ ಕಾರ್ಯಕರ್ತರು, ಮುಖಂಡರ ಸಭೆ ಕರೆದಿರುವ ಕುಮಾರಸ್ವಾಮಿ, ಟಿಕೆಟ್ ಹಂಚಿಕೆ ಬಗ್ಗೆ ಅವರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಈ ಸಭೆಯಲ್ಲಿ ಮಾಜಿ ಜಿಪಂ ಸದಸ್ಯರು, ತಾಪಂ ಮಾಜಿ ಸದಸ್ಯರು, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇರುವ ಪ್ರಮುಖರು ಭಾಗಿಯಾಗಲಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಅವರ ಕಚೇರಿಯಿಂದಲೇ ಹಾಸನದ ಪ್ರಮುಖ ಕಾರ್ಯಕರ್ತರಿಗೆ ಸಭೆಗೆ ಹಾಜರಾಗುವಂತೆ ಫೋನ್ ಮೂಲಕ ಆಮಂತ್ರಣ ಹೋಗಿದ್ದು, ಈ ಸಭೆಯಲ್ಲಿ ಸುಮಾರು 300 ಜನ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.