ಅರಸೀಕೆರೆ: ಬೆಳ್ಳಂ ಬೆಳಗ್ಗೆಯೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್. ಆರ್. ಸಂತೋಷ್ ಅವರು ತಮ್ಮ ಪತ್ನಿಯೊಂದಿಗೆ ತೆರಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಈ ಬಾರಿಯ ಚುನಾವಣೆಯು ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗೆ ಬಹಳ ಮುಖ್ಯವಾದ ಚುನಾವಣೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಜನ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.