ಹಾಸನ: ಜಿಲ್ಲೆಯ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸ್ಥಳೀಯರನ್ನು ಕಡೆಗಣಿಸಿರುವ ಕಾರಣ ಸ್ವಾಭಿಮಾನದ ಸಂಕೇತವಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಲೋಕೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ಹೊರಗಿನ ಅಭ್ಯರ್ಥಿಗಳನ್ನು ಮಣೆ ಹಾಕುತ್ತಿದ್ದಾರ, ಇದರಿಂದ ಸ್ಥಳೀಯ ಮುಖಂಡರಿಗೆ ಅನ್ಯಾಯವಾಗುತ್ತಿದೆ.
ಸಕಲೇಶಪುರ-ಆಲೂರು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷದಿಂದ ಪ್ರಮಾಣಿಕವಾಗಿ ಕಾಂಗ್ರೆಸ್ ಪಕ್ಷದ ಪ್ರಗತಿಗೆ ದುಡಿಯುತ್ತಿದ್ದು, ಸೇವಾ ದಳದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ನಮ್ಮನ್ನು ಹೊರತುಪಡಿಸಿ ತಮಿಳುನಾಡು ಮೂಲದ ಮುರಳಿ ಮೋಹನ್ ಅವರಿಗೆ ಟಿಕೆಟ್ ನೀಡಿದ್ದಾರೆ. ಆದ್ದರಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಫಯಾಜ್ ಪಾಷಾ, ಅವಿನಾಶ, ಆನಂದ, ಶಿವಕುಮಾರ ಇದ್ದರು.