ಆಲೂರು: ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಹಗಲು ಇರುಳು ದುಡಿದಂತಹ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರಿಗೆ, ಅಭಿಮಾನಿಗಳಿಗೆ ಅಭಿನಂದನೆ ಹಾಗೂ ಧನ್ಯವಾದಗಳು ತಿಳಿಸುತ್ತೇವೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸೋಲನ್ನು ಅನುಭವಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜವಾಗಿದ್ದು, ಸೋಲನ್ನು ಪ್ರೀತಿಯಿಂದ ಸ್ವೀಕರಿಸುತ್ತೇವೆ. ಕಳೆದ 15 ವರ್ಷಗಳಲ್ಲಿ ಕ್ಷೇತ್ರದ ಜನರು ನಮ್ಮ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸವನ್ನು ನಾವು ಸ್ಮರಿಸುತ್ತೇವೆ, ಚುನಾವಣೆಯ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ತಿಳಿಸುತ್ತೇವೆ, ಪಕ್ಷದ ಕಾರ್ಯಕರ್ತರು ಮುಖಂಡರುಗಳು ಧೃತಿಗೆಡಬೇಡಿ, ನಾವು ನಿಮ್ಮಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿ ಇರುತ್ತೇವೆ, ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಬಹಳ ಒಡನಾಟ ಮಾಡಿಕೊಂಡು ಭ್ರಷ್ಟಾಚಾರ ದಬ್ಬಾಳಿಕೆಯ ವಿರುದ್ಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ ಮತ್ತು ಜೆಡಿಎಸ್ ಮುಖಂಡರಾದಂತಹ ಧರ್ಮಪ್ಪ, ಶಿವಸಾಗರ, ಅರಸಪ್ಪ, ಆಲೂರು ಬಸವರಾಜ್ ಮುಂತಾದವರಿದ್ದರು.