ಸಕಲೇಶಪುರ: ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ಕುರಬತ್ತೂರು ಗ್ರಾಮಪಂಚಾಯಿತಿಯಲ್ಲಿ ಕಾಂಗ್ರೇಸ್ ಗ್ಯಾರಂಟಿ ಕಾರ್ಡ್ ವಿತರಣೆ ಮತ್ತು ಕಾರ್ಯಕರ್ತರ ಸಭೆ ಹಾಗೂ ನೂತನ ಅಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ನೂರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಕ್ರಮ ಉದ್ಘಾಟನೆಯನ್ನು ಅಕಾಲಿಕ ಮರಣ ಹೊಂದಿದ ಜಿಲ್ಲಾ ಉಸ್ತುವಾರಿಯಾಗಿದ್ದ ದ್ರುವ ನಾರಾಯಣ ಭಾವಚಿತ್ರಕ್ಕೆ ದೀಪಾ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರಾದ ಮುರುಳಿ ಮೋಹನ್, ಸಕಲೇಶಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರುಮುಡಿ ಚಂದ್ರಣ್ಣ, ಕೆ.ಪಿ ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಅರ್ಜುನ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಟಿ ಕಿರಣ್, ಕಾಂಗ್ರೆಸ್ ಮುಖಂಡರಾದ ಕೆ.ಡಿ ಮಂಜುನಾಥ, ಚಿನ್ನಹಳ್ಳಿ ಬಾಲು, ಸೇರಿದಂತೆ ಹೆಚ್ಚಿನ ಸಂಖ್ಯೆಯ ಕುರಬತ್ತೂರು ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.