ಚನ್ನರಾಯಪಟ್ಟಣ: ತಮ್ಮ ಊರಿನ ಮಗನಂತೆ ಆಶೀರ್ವದಿಸಿ, ಮೂರನೇ ಬಾರಿ ಗೆಲುವು ಸಾಧಿಸಲು ಸಹಕರಿಸಿದ ಶೆಟ್ಟಿಹಳ್ಳಿಯ ಜನತೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ತಿಳಿಸಿದರು.
ಶಾಸಕ ಬಾಲಕೃಷ್ಣ ಅವರು ತಾಲೂಕಿನ ಕಸಬಾ ಹೋಬಳಿ ಶೆಟ್ಟಿಹಳ್ಳಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವಕರು ಹಾಗೂ ಗ್ರಾಮಸ್ಥರು ಸೇರಿ ಕೇಕ್ ಕತ್ತರಿಸಿ ಹೂವಿನ ಹಾರ ಹಾಕಿ ಪಟಾಕಿ ಸಿಡಿಸಿ ಗೌರವ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ ಕ್ಷೇತ್ರಕ್ಕೆ ಒತ್ತು ನೀಡಿದ್ದರಿಂದ ತಾಲೂಕಿನ ಜನತೆ ಪುನಃ ಆಯ್ಕೆಯಾಗಿ ಬರಲು ಆಶೀರ್ವಾದ ಮಾಡಿದ್ದಾರೆ ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.
ನನ್ನ 29 ವರ್ಷಗಳ ರಾಜಕೀಯ ಜೀವನದಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಯಿಂದಲೂ ಕೂಡ ಶೆಟ್ಟಿಹಳ್ಳಿ ಗ್ರಾಮದಲ್ಲಿ ಪ್ರೀತಿಯಿಂದ ಕಂಡಿದ್ದೀರಿ, ಅಭಿವೃದ್ಧಿ ಮಾಡುವ ಮೂಲಕ ನಿಮ್ಮ ಋಣವನ್ನು ತೀರಿಸುತ್ತೇನೆ ಎಂದರು.