ಹಾಸನ: ನಮ್ಮ ಡಬಲ್ ಇಂಜಿನ್ ಸರಕಾರವು ರಾಜ್ಯಕ್ಕೆ ಮತ್ತು ಜಿಲ್ಲೆಗೆ ಅನೇಕ ಅಭಿವೃದ್ಧಿ ಕೆಲಸ, ಜನ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು, ಯಶಸ್ವಿ ಅಧಿಕಾರ ನಡೆಸುತ್ತಿದೆ. 2023ರ ಚುನಾವಣೆಯಲ್ಲಿ ಬಿಜೆಪಿಯು 140ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಂಕಲ್ಪವನ್ನು ಹೊಂದಿದ್ದೇವೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.
ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತದಲ್ಲಿ ಜಾರಿಗೆ ಬಂದ ಯೋಜನೆಯ ಕಾರ್ಯಕ್ರಮಗಳನ್ನು ಜನರಿಗೆ ಪ್ರೊಜಕ್ಟರ್ ಮೂಲಕ ತಿಳಿಸುವ ಪ್ರಗತಿ ರಥದ ವಾಹನಕ್ಕೆ ಪಕ್ಷದ ಬಾವುಟ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಡಬಲ್ ಇಂಜಿನ್ ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಕ್ಕೆ ಕೊಡುಗೆ ಕೊಟ್ಟಿದ್ದು, ಕಳೆದ ಮೂರುವರೆ ವರ್ಷಗಳಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಈಗಿನ ಹಾಲಿ ಸಿಎಂ ಬಸವರಾಜು ಬೊಮ್ಮಾಯಿರವರ ಕೊಡುಗೆ ನೀಡಿರುವ ಯೋಜನೆಯನ್ನು ಪ್ರತಿ ಮನೆ ಮನೆಗೂ ತಿಳಿಸುವ ಉದ್ದೇಶದಿಂದ ಪ್ರಗತಿ ವಾಹನವನ್ನು ನಗರದಲ್ಲಿ ಚಾಲನೆ ಕೊಡಲಾಗಿದೆ ಎಂದರು.
ಸರಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ಭಾಗಗಳಿಗೂ ವಾಹನ ತೆರಳಿ ಪ್ರಚಾರ ಮಾಡಲಿದೆ. ಸರಕಾರದ ಎಲ್ಲಾ ಯೋಜನೆಗಳನ್ನು ಒಳಗೊಂಡ ಕಿರುಚಿತ್ರವನ್ನು ಈ ಪ್ರಗತಿ ರಥದಲ್ಲಿ ತಿಳಿಸಲಾಗುವುದು. 2023ರ ಚುನಾವಣೆಯಲ್ಲಿ ಬಿಜೆಪಿಯು 140ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಂಕಲ್ಪವನ್ನು ಹೊಂದಿದ್ದು, ಅದರ ನಾಂದಿಯನ್ನು ಈ ರಥದ ಮೂಲಕ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ, ಗ್ರಾಮಾಂತರ ಉಪಾಧ್ಯಕ್ಷರಾದ ಗುರುಪ್ರಸಾದ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹರ್ಷಿತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಹುಲ ಕಿಣಿ, ಗೋಪಿನಾಥ, ಮುರುಳಿ, ಚಂದ್ರಶೇಖರ, ದರ್ಶನ, ಪ್ರೀತಿವರ್ಧನ ಇತರರು ಉಪಸ್ಥಿತರಿದ್ದರು.